ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ : ರಾಜ್ಯದ ಮೂಲೆ ಮೂಲೆಯಲ್ಲಿ ಬಿಜೆಪಿ ಯುವಮೋರ್ಚ ಹಾಗೂ ಸಾಮಾಜಿಕ ಜಾಲತಾಣ ವಿಭಾಗದಿಂದ ರಾಜೀನಾಮೆ ಪರ್ವ: vishwanews24
ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ : ರಾಜ್ಯದ ಮೂಲೆ ಮೂಲೆಯಲ್ಲಿ ಬಿಜೆಪಿ ಯುವಮೋರ್ಚ ಹಾಗೂ ಸಾಮಾಜಿಕ ಜಾಲತಾಣ ವಿಭಾಗದಿಂದ ರಾಜೀನಾಮೆ ಪರ್ವ:vishwanews24
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಖಂಡಿಸಿ ರಾಜ್ಯದ ಮೂಲೆ ಮೂಲೆಯಲ್ಲಿ ಬಿಜೆಪಿ ಯುವಮೋರ್ಚ ಹಾಗೂ ಸಾಮಾಜಿಕ ಜಾಲತಾಣ ವಿಭಾಗದಿಂದ ರಾಜೀನಾಮೆ ಪರ್ವ ಜೋರಾಗಿಯೇ ಸುದ್ದಿ ಮಾಡುತ್ತಿದೆ. ಚಿಕ್ಕಮಗಳೂರು-ಧಾರವಾಢ-ಬೆಂಗಳೂರು-ಶಿವಮೊಗ್ಗ ಸೇರಿದಂತೆ ವಿವಿದ ಕಡೆ ಕಟ್ಟರ್ ಹಿಂದುತ್ವವಾದಿಗಳಿಂದ ನೈಜ ಬಿಜಪಿ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.ರಾಜ್ಯ ಸರ್ಕಾರ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗುತ್ತಿದೆ ಎಂಬ ಕಾರಣಕ್ಕಾಗಿ ರಾಜೀನಾಮೆ ಪರ್ವ ರಾಜ್ಯದೆಲ್ಲೆಡೆ ಪ್ರಾರಂಭವಾಗಿದೆ.
