ಬಿಜೆಪಿ ಸರ್ಕಾರ ಪತನವಾಗಬಾರದು. ಇನ್ನೂ ಎರಡು ವರ್ಷ ಕೆಲಸ ಮಾಡಲಿ : ಜೆಡಿಎಸ್‌ ಶಾಸಕ ವೆಂಕಟರಾವ್‌ ನಾಡಗೌಡ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ನಾವ್ಯಾರೂ ಮಧ್ಯಂತರ ಚುನಾವಣೆ ಬಯಸುತ್ತಿಲ್ಲ. ಬಿಜೆಪಿ ಸರ್ಕಾರ ಇನ್ನೂ ಎರಡು ವರ್ಷ ಕೆಲಸ ಮಾಡಲಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್‌ ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ವರ್ಷಕ್ಕೊಂದು ಚುನಾವಣೆ ನಡೆಯುವುದು ಸೂಕ್ತವಲ್ಲ. ಗೊಂದಲದಿಂದ ನಮ್ಮ ಸರ್ಕಾರ ಬಿದ್ದು ಹೋಯಿತು ಎಂದರು.

ಮಧ್ಯಂತರ ಚುನಾವಣೆ ಬರುತ್ತದೆ ಎಂದು ನಿರ್ದಿಷ್ಟವಾಗಿ ಹೇಳುವುದು ಕಷ್ಟ. ಒಂದೇ ವರ್ಷದಲ್ಲಿ ಎರಡೆರಡು ಚುನಾವಣೆ ಎದುರಿಸುವುದು ಜನಪ್ರತಿನಿಧಿಗಳಿಗೆ ಕಷ್ಟವಾಗುತ್ತದೆ. ಹೀಗಾಗಿ ಬಿಜೆಪಿ ಸರ್ಕಾರ ಪತನವಾಗಬಾರದು. ಇನ್ನೂ ಎರಡು ವರ್ಷ ಕೆಲಸ ಮಾಡಲಿ ಎನ್ನುವ ಬಯಕೆ ಇದೆ. ಆದರೆ, ನಾವು ಈ ರೀತಿ ಹೇಳಿದರೆ ಬಿಜೆಪಿ ಪರ ಒಲವಿದೆ ಎಂದು ಅಲ್ಲ ಎಂದು ಸ್ಪಷ್ಟಪಡಿಸಿದರು.

ನೆರೆ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆ ಅನುದಾನ ಬಂದಿಲ್ಲ. ಈ ಬಗ್ಗೆ ಅಸಮಾಧಾನ ನಮಗೂ ಇದೆ. ಕೇಂದ್ರದಲ್ಲಿ ಅವರದೇ ಸರ್ಕಾರ ಇದ್ದರೂ ಅನುದಾನ ನೀಡಿಲ್ಲ. ಇದರಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೂ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಬಂಧಗಳು ಸರಿ ಇಲ್ಲವೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ನಾಡಗೌಡ ಅನುಮಾನ ವ್ಯಕ್ತಪಡಿಸಿದರು.