ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

Featured, ರಾಷ್ಟ್ರ ನ್ಯೂಸ್

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.

ಪಾಟ್ನಾದ ಲೋಕ ಭವನದಲ್ಲಿ ಬಿಹಾರದ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಸಾಮ್ರಾಟ್ ಚೌಧರಿ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸಾಮ್ರಾಟ್ ಚೌಧರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

Leave a Reply