ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು :“ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ” ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್ ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.
ಇದನ್ನೂ ಓದಿ :
ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ
“ನಮ್ಮ ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬಲಾಗುತ್ತಿದೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ. ನಿಮಗೆ ಸರಕಾರದ ಪರವಾಗಿ ಅಭಿನಂದನೆಗಳು. ಸಾಧನೆ ಸಾಮರ್ಥ್ಯಕ್ಕಿಂತ ನಿಮ್ಮ ಗುರಿ ನಿರ್ಧಾರ ಮಾಡಿದಾಗ ಜಯ ನಿಮ್ಮದಾಗಲಿದೆ” ಎಂದರು.
“ನಮ್ಮ ಪೊಲೀಸರು ಒಂದು ವರ್ಷದಲ್ಲಿ 375 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು 1500 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಇದು ದೊಡ್ಡ ದಾಖಲೆ. ಇಡೀ ದೇಶ ಕರ್ನಾಟಕವನ್ನು ಗಮನಿಸುತ್ತಿದೆ. ಡ್ರಗ್ಸ್ ಜಾಲವನ್ನು ಬೇಧಿಸಿದ ತಂಡಕ್ಕೆ ಸರಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರತಿಯೊಬ್ಬ ನಾಗರಿಕನೂ ಇಲಾಖೆ ಮೇಲೆ ಗೌರವ ಇಟ್ಟುಕೊಳ್ಳುವಂತೆ ಕೆಲಸ ಮಾಡಬೇಕು. ನಿಮ್ಮ ಯಶಸ್ಸೇ ಸರ್ಕಾರದ ಯಶಸ್ಸು” ಎಂದು ತಿಳಿಸಿದರು.
ಇದನ್ನೂ ಓದಿ :
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24
