ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ; ಪ್ರಯಾಣಿಕರು ಸುರಕ್ಷಿತ – vishwanews24
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಪಕ್ಷಿ ಡಿಕ್ಕಿ ..
ಪ್ರಯಾಣಿಕರು ಸುರಕ್ಷಿತ –ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಸೇಫ್ ಲ್ಯಾಂಡಿಂಗ್
ಬೆಂಗಳೂರು: ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಸೋಮವಾರ ಹಕ್ಕಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದೆ. ವಿಮಾನದಲ್ಲಿದ್ದ 148 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಘಟನೆ ನಡೆದಿದ್ದರೂ ವಿಮಾನವು ತನ್ನ ಪ್ರಯಾಣವನ್ನು ಪೂರ್ಣಗೊಳಿಸಿದೆ. ಭೂಸ್ಪರ್ಶದ ನಂತರ ಅದನ್ನು ಪಾರ್ಕಿಂಗ್ ಸ್ಟ್ಯಾಂಡ್‌ಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.
ಇದನ್ನೂ ಓದಿ:
ಉಡುಪಿ ಉಚ್ಚಿಲ ದಸರಾ- 2026 : ಅ. 21ರಂದು ವಿಜಯದಶಮಿ, ಮಹಾ ಚಂಡಿಕಾಯಾಗ ಮತ್ತು ಶೋಭಾಯಾತ್ರೆ – vishwanews24
ಶನಿವಾರ ಕೂಡ ಇಂತಹದ್ದೇ ಅವಘಡ ಸಂಭವಿಸಿತ್ತು. ದುಬೈನಿಂದ ಆಗಮಿಸಿದ ಎಮಿರೇಟ್ಸ್ ವಿಮಾನವೊಂದು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪಕ್ಷಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ, ಆ ವಿಮಾನದ ಹಾರಾಟದಲ್ಲಿ ವಿಳಂಬ ಉಂಟಾಗಿತ್ತು.
ಮಧ್ಯಾಹ್ನ 3:10ರ ಸುಮಾರಿಗೆ, ಟರ್ಮಿನಲ್ 3ರ ಸಮೀಪವಿರುವ ರನ್‌ವೇ ಮೇಲೆ ವಿಮಾನವು ಇಳಿಯುತ್ತಿದ್ದಾಗ ಈ ಘಟನೆ ನಡೆಯಿತು.
ಇದನ್ನೂ ಓದಿ:
ಕೊಣಾಜೆ : ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಪ್ರಕರಣ ; ಇಬ್ಬರು ಸವಾರರು ಮೃತ್ಯು – vishwanews24
