ಬೆಂಗಳೂರಿನಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರಿನಲ್ಲಿ ಮತ್ತೆ ಮಹಿಳೆ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ.

ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು, ಪರಿಚಯಸ್ಥನೆ ಮಹಿಳೆಯ ಮೇಲೆ ಆ್ಯಸಿಡ್ ದಾಳಿ ಮಾಡಿದ್ದು ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ ಆರೋಪಿ ಅಹ್ಮದ್, ಮಹಿಳೆಗೆ ಮದುವೆಯಾಗುವಂತೆ ಆರೋಪಿ ಅಹ್ಮದ್ ದುಂಬಾಲು ಬಿದ್ದಿದ್ದ ಎನ್ನಲಾಗಿದ್ದು, ಇದಕ್ಕೆ ಒಪ್ಪದಿದ್ದಾಗ ಆರೋಪಿ ಮಹಿಳೆಗೆ ಆ್ಯಸಿಡ್ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಲ್ನಡಿಗೆಯಲ್ಲೇ ಪವಿತ್ರ ಹಜ್ ಯಾತ್ರೆಗೆ ಹೊರಟ ಮುಸ್ಲಿಂ ಯುವಕ ಶಿಹಾಬ್‌: ಮಂಗಳೂರಿನಲ್ಲಿ ಭವ್ಯ ಸ್ವಾಗತ – Vishwanews24

 

Leave a Reply