ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ಗೆ ಬೈಕ್​​ ಡಿಕ್ಕಿ : ಇಬ್ಬರು ಸವಾರರು ಸ್ಥಳದಲ್ಲೇ ಸಾವು – Vishwanews24

Featured, ರಾಜ್ಯ ನ್ಯೂಸ್

ಓವರ್ ಟೇಕ್ ಮಾಡುವ ಭರದಲ್ಲಿ ಬಸ್​ಗೆ ಬೈಕ್​​ ಡಿಕ್ಕಿ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು : ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್​​ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.

ಚಿಕ್ಕಮಂಗಳೂರು : ನಾಳೆಯಿಂದ ದತ್ತಮಾಲೆ ಅಭಿಯಾನ .. 1,500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ – Vishwanews24

ಇವರು ಬೈಕ್​​ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು. ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

Leave a Reply