ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24

Featured, ರಾಜ್ಯ ನ್ಯೂಸ್

ದಕ್ಷಿಣ ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು : ದಕ್ಷಿಣ ಭಾರತದ ಮೊಟ್ಟಮೊದಲ ವಂದೆ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಇಂದು ಪ್ರಧಾನಿ ಮೋದಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ ಫ್ಲಾಟ್ ಫಾರ್ಮ್ ನಂ.7ಅಲ್ಲಿ ಹಸಿರು ನಿಶಾನೆ ನೀಡಿದರು.

ಮೈಸೂರು-ಚೆನ್ನೈ-ಬೆಂಗಳೂರು ಮಾರ್ಗವಾಗಿ ಹಾಗೂ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಸಾಗಲಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ಕೂಡ ಆಗಮಿಸಿದ್ದರು. ಮೋದಿ ಚಾಲನೆ ನೀಡಿದ ಬಳಿಕ ರೈಲು ಚೆನ್ನೈ ಕಡೆ ಪ್ರಯಾಣ ಬೆಳೆಸಿತು. ಮೊದಲಿಗೆ ಟ್ರೇನ್-18 ಎಂದು ನಾಮಕರಣ ಮಾಡಲಾಗಿತ್ತು. ನಂತರ ವಂದೇ ಭಾರತ್ ಎಕ್ಸ್ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ,. ಪ್ರಧಾನಿ ನರೇಂದ್ರ ಮೋದಿಯವರು  ಇಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ  ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

⏩ ಮಂಗಳೂರು: ದೊರೆತ ಸ್ಥಾನಕ್ಕೆ ಉತ್ತಮವಾಗಿ ಕೆಲಸ ಮಾಡಿ ತಕ್ಕ ನ್ಯಾಯ ಒದಗಿಸುವೆ.. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ – Vishwanews24

ನಂತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಕಾಸರಗೋಡು: ಕುಂದಾಪುರ ರೈಲ್ವೇ ಹಳಿಯಲ್ಲಿ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಪತ್ತೆ – Vishwanews24

Leave a Reply