ಬೆಂಗಳೂರು:  ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ : ಕಂಡಕ್ಟರ್ ಸಜೀವ ದಹನ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:  ನಿಂತಿದ್ದ BMTC ಬಸ್ಸಿನಲ್ಲಿ ಬೆಂಕಿ : ಕಂಡಕ್ಟರ್ ಸಜೀವ ದಹನ

ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣ ದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್‍ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್‍ನಲ್ಲಿಯೇ ಮಲಗಿದ್ದರು. ಈ ವೇಳೆ ಬಸ್ಸಿಗೆ ದಿಢೀರ್ ಬೆಂಕಿ  ಹೊತ್ತಿಕೊಂಡಿದ್ದು, ಮುತ್ತಯ್ಯ ಅವರು ಮಲಗಿದ್ದಲ್ಲೇ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ. ಇತ್ತ ಮುಂಜಾನೆ ಚಾಲಕ ಎದ್ದು ಶೌಚಕ್ಕೆ ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ.

BMTC FIRE 1

ಗದಗ ಜಿಲ್ಲೆಯ ಹಾಲೂರ ಗ್ರಾಮದ ಮುತ್ತಯ್ಯ ಸ್ವಾಮಿ, ಕಳೆದ ಹಲವು ವರ್ಷಗಳಿಂದ ಬಿಎಂಟಿಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಬಿಎಂಟಿಸಿಯ 31 ರ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಂಗಳೂರು : ಕರಾವಳಿಯ ಕೆಲವೆಡೆ  24 ಗಂಟೆಯ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ – Vishwanews24

Leave a Reply