ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್’ ರೈಲು : ಆ.10ರಂದು ಮೋದಿ ಚಾಲನೆ – vishwanews24

Featured, ರಾಷ್ಟ್ರ ನ್ಯೂಸ್

ಬೆಂಗಳೂರು-ಬೆಳಗಾವಿ ನೂತನ ವಂದೇ ಭಾರತ್’ ರೈಲು : ಆ.10ರಂದು ಮೋದಿ ಚಾಲನೆ

ನವದೆಹಲಿ/ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು  ಸೇರಿದಂತೆ ಒಟ್ಟು 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆಗಸ್ಟ್ 10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಉಡುಪಿ:  ಸೈದ್ಧಾಂತಿಕ‌ ಬದ್ಧತೆ ಇರುವ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವುದು ದೇಶದ ಅದೃಷ್ಟ : ಕಿಮ್ಮನೆ ರತ್ನಾಕರ – vishwanews24

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ವೇಳಾಪಟ್ಟಿ
ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

Leave a Reply