ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..!

ಬೆಂಗಳೂರು:ಬೆಂಗಳೂರು ಮತ್ತು ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ದಿನ ಚಾಲನೆ ದೊರೆಯುವ ಸಾಧ್ಯತೆಯಿದೆ.

ರೈಲ್ವೆ ಇಲಾಖೆಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ವರೆಗೆ ಸಂಚರಿಸಲಿದೆ. ನವೆಂಬರ್ 1ರಂದು ರೈಲು ಸಂಚಾರಕ್ಕೆ ಚಾಲನೆ ದೊರೆಯಲಿದ್ದು, ನವೆಂಬರ್ 2ರಿಂದ ನಿಯಮಿತ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ವಾರದಲ್ಲಿ ಆರು ದಿನ ಈ ರೈಲು ಸಂಚರಿಸಲಿದ್ದು, ಈ ಕುರಿತು ರೈಲ್ವೆ ಮಂಡಳಿಯ ಅಧಿಕೃತ ಅಧಿಸೂಚನೆ ಇನ್ನಷ್ಟೇ ಹೊರಬೀಳಬೇಕಿದೆ.

ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು – vishwanews24

ಸದ್ಯದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ರೈಲು ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ರಾತ್ರಿ 7.50ಕ್ಕೆ ಹೊರಟು, ಮರುದಿನ ಬೆಳಗ್ಗೆ 11.55ಕ್ಕೆ ಮುಂಬೈನ ಸಿಎಸ್‌ಎಂಟಿ ನಿಲ್ದಾಣ ತಲುಪಲಿದೆ. ಈ ಪ್ರಯಾಣಕ್ಕೆ 16 ಗಂಟೆ 5 ನಿಮಿಷ ಬೇಕಾಗಲಿದೆ. ಮುಂಬೈನಿಂದ ವಾಪಸ್ ಬರುವ ರೈಲು ರಾತ್ರಿ 8.10ಕ್ಕೆ ಸಿಎಸ್‌ಎಂಟಿಯಿಂದ ಹೊರಟು, ಮರುದಿನ ಬೆಳಗ್ಗೆ 11.55ಕ್ಕೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣ ತಲುಪಲಿದೆ. ಈ ದಿಕ್ಕಿನ ಪ್ರಯಾಣಕ್ಕೆ 15 ಗಂಟೆ 45 ನಿಮಿಷ ಬೇಕಾಗಲಿದೆ.

ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಗುಂತಕಲ್ ಮಾರ್ಗವಾಗಿ ಸಂಚರಿಸಲಿದೆ. ಅನಂತಪುರ, ಗುಂತಕಲ್, ರಾಯಚೂರು, ಕಲಬುರಗಿ, ಸೊಲ್ಲಾಪುರ, ಪುಣೆ ಮತ್ತು ಕಲ್ಯಾಣ್ ನಿಲ್ದಾಣಗಳಲ್ಲಿ ನಿಲುಗಡೆ ನೀಡುವ ಸಾಧ್ಯತೆಯಿದೆ. ಪ್ರಸ್ತುತ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಪ್ರಯಾಣಕ್ಕೆ ಸಾಮಾನ್ಯವಾಗಿ 22ರಿಂದ 24 ಗಂಟೆಗಳವರೆಗೆ ಸಮಯ ಬೇಕಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ಸೇವೆ ಆರಂಭವಾದರೆ ಈ ಎರಡು ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯ ಕಡಿಮೆಯಾಗುವ ನಿರೀಕ್ಷೆಯಿದೆ.

ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ : ಹೈಕೋರ್ಟ್ – vishwanews24

ರೈಲ್ವೆ ಮಂಡಳಿಯ ಅಧಿಕೃತ ಅಧಿಸೂಚನೆ ಹೊರಬಂದ ಬಳಿಕ ಅಂತಿಮ ವೇಳಾಪಟ್ಟಿ, ನಿಲುಗಡೆಗಳು ಮತ್ತು ಸೇವೆಯ ವಿವರಗಳು ಸ್ಪಷ್ಟವಾಗಲಿವೆ.

 

Leave a Reply