ಬೆಂಗಳೂರು : ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭ : ಪಕ್ಷದ ಮುಖಂಡ ಜಗದೀಶ್ – Vishwanews24
ಬೆಂಗಳೂರಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧ ..
ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭ : ಪಕ್ಷದ ಮುಖಂಡ ಜಗದೀಶ್ – Vishwanews24
ಬೆಂಗಳೂರು: ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದ್ದು, ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದು ಪಕ್ಷದ ಮುಖಂಡ ಹಾಗೂ ಖ್ಯಾತ ವಕೀಲರಾದ ಜಗದೀಶ್ ಮಹಾದೇವ್ ತಿಳಿಸಿದರು.
ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ” ಎಂದು ಹೇಳಿದರು.
ಕುಂದಾಪುರ: ಪಿಕಪ್ ವಾಹನದಲ್ಲಿಅಕ್ರಮ ಗೋ ಸಾಗಾಟ: ಓರ್ವನ ಬಂಧನ, 5 ಜಾನುವಾರುಗಳ ರಕ್ಷಣೆ – Vishwanews24
ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್ ಸಹಾಯವಾಣಿ 9513319676 ಸಂಖ್ಯೆಗೆ ಮೆಸೇಜ್ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ. ಬಿಬಿಎಂಪಿ, ಸ್ಥಳೀಯ ಶಾಸಕ, ಮಾಜಿ ಕಾರ್ಪೊರೇಟರ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟ ಆರಂಭಿಸುತ್ತೇವೆ. ರಾಜಧಾನಿ ಬೆಂಗಳೂರು ಹಾಗೂ ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ನಾವು ಸಂಪೂರ್ಣ ಸಿದ್ಧವಿದ್ದೇವೆ ಎಂದು ಅಭಯ ವ್ಯಕ್ತಪಡಿಸಿದರು.
