ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24
ಬೆಳಗಾವಿ ಲೋಕಸಭಾ ಉಪ ಚುನಾವಣೆ’ಗೆ ಕಾಂಗ್ರೆಸ್ ನಿಂದ ‘ಸತೀಶ್ ಜಾರಕಿಹೊಳಿಗೆ’ ಟಿಕೆಟ್ ಘೋಷಣೆ -Vishwanews24
ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ರಂಗೇರಿದೆ. ಇಂತಹ ಸಂದರ್ಭದಲ್ಲಿ, ಇದೀಗ ಕಾಂಗ್ರೆಸ್ ನಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವಂತ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಮುಖಲ್ ವಾಷ್ನಿಕ್ ಟಿಕೆಟ್ ಘೋಷಣೆ ಮಾಡಿರುವ ಬಗ್ಗೆ ಪ್ರಕಟಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿಯವರಿಗೆ ಟಿಕೆಟ್ ನೀಡಲಾಗಿದೆ.
ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24
