ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ ಬಳಿ ನಡೆದಿದೆ.

ಎಸ್‌ಐಟಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಚಾರ್ಮಾಡಿ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ಅಪಘಾತದ ಬಳಿಕ ಎಸ್ಪಿ ಸಿ.ಎ. ಸೈಮನ್ ಮತ್ತು ತಂಡ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಘಟನೆ ಕುರಿತು ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

 

Leave a Reply