ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ : ನಾಲ್ವರಿಗೆ ಗಾಯ

ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಆಂಬ್ಯುಲೆನ್ಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ಗುರುವಾರ ರಾತ್ರಿ ಈ ಘಟನೆ ವರದಿಯಾಗಿದೆ.

ಅಪಘಾತದಿಂದಾಗಿ ಸರಿಸುಮಾರು ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಂ ಉಂಟಾಗಿದೆ. ಸಂಜೆಯ ವೇಳೆ ಘಟನಾ ಸ್ಥಳದ ಅನತಿ ದೂರದಲ್ಲಿ ಇನ್ನೊಂದು ಆಂಬುಲೆನ್ಸ್ ಹಾಗೂ ರಿಕ್ಷಾ ಪರಸ್ಪರ ಢಿಕ್ಕಿಯಾಗಿತ್ತು. ರಾತ್ರಿ ಇನ್ನೊಂದು ಆಂಬುಲೆನ್ಸ್ ಮತ್ತು ಲಾರಿ ಪರಸ್ಪರ ಢಿಕ್ಕಿಯಾಗಿದೆ.

ಮಂಗಳ ಕಾರ್ಯಗಳಿಂದ ಶುಭ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರನ್ನು ಬೆಳ್ತಂಗಡಿಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಮೂಲತಃ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ್ದಾಗಿದೆ. ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಎರಡೂ ವಾಹನಗಳು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

Leave a Reply