ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ :ತರಕಾರಿ ಸಾಗಾಟ ವಾಹನದಲ್ಲಿ ಅಕ್ರಮ ಗೋ ಸಾಗಾಟ – 15ಕ್ಕೂ ಅಧಿಕ ಹಸುಗಳ ರಕ್ಷಣೆ ; ಚಾಲಕ ಪರಾರಿ

ಬೆಳ್ತಂಗಡಿ : ಮಂಗಳೂರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ತಡೆಹಿಡಿಯಲಾಗಿದೆ.

ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಗೋವುಗಳನ್ನು ವಧೆಗೆಂದು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಲಪಂಥೀಯ ಸಂಘಟನೆಯ ಸದಸ್ಯರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.

ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, 12 ಮಂದಿಗೆ ಗಾಯ – vishwanews24

ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ವಾಹನ ಮತ್ತು 15 ಕ್ಕೂ ಹೆಚ್ಚು ಜಾನುವಾರುಗಳನ್ನು ವಶಕ್ಕೆ ಪಡೆದರು.

Leave a Reply