ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ – ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ – ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತ್ಯು

ಬೆಳ್ತಂಗಡಿ: ಸೋಮವಾರ (ಮಾ.25 ರಂದು) ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮಂಗಳವಾರ(ಮಾ.26 ರಂದು) ಮೃತಪಟ್ಟಿದ್ದಾನೆ.

ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ – ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ – Vishwanews24

ಏನಿದು ಘಟನೆ?: ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು, ದ್ವಿಚಕ್ರ ಸವಾರ ಪುರುಷೋತ್ತಮ(19) ಎಂಬಾತ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಡುಬಿದಿರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಇನ್ನೂ ಬಂಧನವಾಗದ ಆರೋಪಿ ಶಿಕ್ಷಕ ; ಗ್ರಾಮಸ್ಥರ ಅಸಮಾಧಾನ – Vishwanews24

ಈ ಘಟನೆಯಲ್ಲಿ ಸಹಸವಾರ ತೌಫೀಕ್ ಗಂಭೀರ ಗಾಯಗೊಂಡು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಗಂಭೀರ ಗಾಯಗೊಂಡಿದ್ದ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಅವರ ಮಗ ತೌಫೀಕ್ (17) ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

Leave a Reply