ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ -ಮೂರು ವರ್ಷದ ಬಾಲಕ ಸಾವು – vishwanews24
ಬೆಳ್ತಂಗಡಿ : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ -ಮೂರು ವರ್ಷದ ಬಾಲಕ ಸಾವು
ಚಾರ್ಮಾಡಿ : ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಪುಟ್ಟ ಬಾಲಕನೊಬ್ಬ ಸಾವನಪ್ಪಿದ ಘಟನೆ ಡಿಸೆಂಬರ್ 3 ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಪುತ್ರ ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ.
ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದ ಇಂಡಿಗೋ – viswhanews24
ಮೃತ ಬಾಲಕ ತನ್ನ ಮನೆಯ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿ, ಹಿಂದಿರುಗುವಾಗ ರಸ್ತೆ ದಾಟಲು ಪ್ರಯತ್ನಿಸುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
