ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ: ಸಿಐಡಿ ತನಿಖೆ ಆರಂಭ

ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ವಾಪಸ್ ನೀಡದೆ (ವಂಚನೆ) ಹಗರಣ ಮಾಡಿರುವ ಪ್ರಕರಣಕ್ಕೆ ಸಿಐಡಿ ತನಿಖೆ ಆರಂಭಗೊಂಡಿದೆ.

ಇಂದು ಸೊಸೈಟಿಗೆ ಬೆಂಗಳೂರಿನಿಂದ ಸಿಐಡಿ ತನಿಖಾ ತಂಡ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ :

ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನ : ತಮ್ಮನ ನೆನೆದು ಶಿವಣ್ಣ ಭಾವುಕ ಪೋಸ್ಟ್​ – vishwanews24

ಪ್ರಕರಣದ ವಿವರ:

ಬೆಳ್ತಂಗಡಿ ನಗರದ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿರುವ ರಾಮನಗರದದಲ್ಲಿ ಸುಮಾರು 25 ವರ್ಷಗಳಿಂದ ಏಕೈಕ ಬ್ರಾಂಚ್ ಆಗಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ)ಯಲ್ಲಿ ಆಡಳಿತ ಮಂಡಳಿಯವರು ಗ್ರಾಹಕರಿಗೆ ಸೇರಿದ ಠೇವಣಿ ಹಣ ಸುಮಾರು 40 ಕೋಟಿ ರೂ.ನ್ನು ಗ್ರಾಹಕರಿಗೆ ಹಿಂದಿರುಗಿಸದೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ವಂಚನೆಗೊಳಗಾದ ಬೆಳ್ತಂಗಡಿ ನಿವಾಸಿ ದಯಾನಂದ ನಾಯಕ್ ಸೇರಿ ಒಟ್ಟು 13 ಮಂದಿ ಗ್ರಾಹಕರು ಸೊಸೈಟಿಯ 14 ಜನರ ವಿರುದ್ಧ 22-05-2025ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಿಐಡಿ ತನಿಖೆ ಆರಂಭ:

40 ಕೋಟಿ ರೂ. ವಂಚನೆ ಪ್ರಕರಣವಾಗಿರುವ ಕಾರಣ ಇದರ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ಮಂಗಳೂರು ಸೆನ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು ಬಳಿಕ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಬೆಂಗಳೂರು ಸಿಐಡಿ ಇನ್ ಸ್ಪೆಕ್ಟರ್ ಹರೀಶ್ ನೇತೃತ್ವದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ :

ಮಾ. 21ರವರೆಗೆ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : 25 ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಮುನ್ಸೂಚನೆ – vishwanews24

Leave a Reply