ಬೆಳ್ತಂಗಡಿ : ಶ್ರೀ ಮಂಜುನಾಥಸ್ವಾಮಿಯ ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ : ಡಿಕೆ ಶಿವಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆ ಶಿವಕುಮಾರ್

ಬೆಳ್ತಂಗಡಿ; ಧರ್ಮಸ್ಥಳ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಧರ್ಮಸ್ಥಳದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್ ಅವರು, ಶ್ರೀ ಮಂಜುನಾಥಸ್ವಾಮಿಯ ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ. ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದರು.

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಮನನೊಂದು ಕೃಷಿಕ ಆತ್ಮಹತ್ಯೆ – Vishwanews24

ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಾತುಬಿಡ ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಅದೇ ದೊಡ್ಡ ಆಶೀರ್ವಾದವಾಗಿದೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿ‌ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಿಥುನ್ ರೈ, ರಂಜನ್. ಜಿ ಗೌಡ, ನಾಗೇಶ್ ಕುಮಾರ್, ಅಭಿನಂದನ್ ಹರೀಶ್, ಭರತ್, ಅಭಿದೇವ್, ಹಾಗೂ ಇತರರು ಇದ್ದರು.

ಬೆಳ್ತಂಗಡಿ : ಬೈಕಿಗೆ ಪಿಕಪ್ ಢಿಕ್ಕಿ – ಗಂಭೀರ ಗಾಯಗೊಂಡಿದ್ದ ಸಹಸವಾರ ಮೃತ್ಯು – Vishwanews24

Leave a Reply