ಬೈಂದೂರು: ಭೀಕರ ಅಪಘಾತ ; ಡಿವೈಡರ್ ಗೆ ಕಾರು ಢಿಕ್ಕಿ – ಮಾಜಿ ಜಿ.ಪಂ ಸದಸ್ಯನ ಸ್ಥಿತಿ ಗಂಭೀರ – Vishwanews24

Featured, ಉಡುಪಿ

ಬೈಂದೂರು: ಭೀಕರ ಅಪಘಾತ ; ಡಿವೈಡರ್ ಗೆ ಕಾರು ಢಿಕ್ಕಿ – ಮಾಜಿ ಜಿ.ಪಂ ಸದಸ್ಯನ ಸ್ಥಿತಿ ಗಂಭೀರ

ಬೈಂದೂರು : ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ ಸದಸ್ಯ ರತ್ನಾಕರ್ ನಾಯ್ಕ್ ಎಂದು ಗುರುತಿಸಲಾಗಿದೆ.ಕುಂದಾಪುರದಿಂದ ಕಾರವಾರ ಕಡೆಗೆ ಸಾಗುತ್ತಿದ್ದ ಕಾರು ಅಕಸ್ಮಾತ್ ಆಗಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ರತ್ನಾಕರ್ ನಾಯ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ರತ್ನಾಕರ್ ನಾಯ್ಕ್ ರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply