ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ
ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ (ಆ.23) ರಾತ್ರಿ ನಡೆದಿದೆ.
ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ, ಅವರ ಪುತ್ರ ಶಾಹಿದ್ ಅಲಿ ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ- ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು
ಪೊಲೀಸ್ ಮೂಲಗಳು ತಿಳಿಸಿವೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕುಟುಂಬ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
