ಬ್ರಹ್ಮಾವರ : ಯುವಕನಿಗೆ ಲೈಂಗಿಕ ಕಿರುಕುಳ ; ಆರೋಪಿ ವಾಸ್ತುತಜ್ಞ ಅನಂತ ನಾಯ್ಕ ಬಂಧನ – Vishwanews24

Featured, ಉಡುಪಿ

ಬ್ರಹ್ಮಾವರ : ಯುವಕನಿಗೆ ಲೈಂಗಿಕ ಕಿರುಕುಳ – ಆರೋಪಿ ವಾಸ್ತುತಜ್ಞ ಅನಂತ ನಾಯ್ಕ ಬಂಧನ

ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಾವರ ಸಮೀಪದ ಚಾಂತಾರು ನಿವಾಸಿ ಅನಂತ ನಾಯ್ಕ(51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ.

ಶಿರ್ವ: ಕಚ್ಚಾ ಸಾಮಾಗ್ರಿ ಕಾಯಿಲ್‌ ಪೂರೈಸುವುದಾಗಿ ನಂಬಿಸಿ ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು – Vishwanews24

 

18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಅನಂತ ನಾಯ್ಕ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಆರೋಪಿ ಅನಂತ ನಾಯ್ಕನನ್ನು ಇಂದು ಬೆಳಗ್ಗೆ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

ಯುವ ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ನಿಧನ – Vishwanews24

Leave a Reply