ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ – Vishwanews24
ಭಟ್ಕಳ : ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆ: ಓರ್ವ ನಾಪತ್ತೆ; ಇಬ್ಬರ ರಕ್ಷಣೆ
ಭಟ್ಕಳ: ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ .
ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ.
ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರರ ಜಾಲಿ ನಿವಾಸಿ ನಾಗರಾಜ ರಾಮಕೃಷ್ಣ ಮೊಗೇರ ಎಂದು ತಿಳಿದುಬಂದಿದೆ.ರವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂಬವರನ್ನು ರಕ್ಷಿಸಲಾಗಿದೆ.
ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದ ಮೀನುಗಾರನಿಗಾಗಿ ಹುಡುಕುಕಾಟ ಮುಂದುವರಿದಿದೆ.
ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು – Vishwanews24
