ಭಾರತದ ಕ್ರಿಕೆಟ್ಗೆ ನೀಡಿದ ಕೊಡುಗೆ ಅದ್ಭುತವಾದದ್ದು , ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ: ಧೋನಿಗೆ ಪ್ರಧಾನಿ ಮೋದಿ -Vishwanews24
ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು, ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ.
ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ ತಮ್ಮ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.
ಧೋನಿಯವರಿಗೆ ಪತ್ರ ಬರೆದಿರುವ ಮೋದಿಯವರು, ಧೋನಿಯವರು ಭಾರತದ ಕ್ರಿಕೆಟ್ಗೆ ನೀಡಿದ ಕೊಡುಗೆ ಅದ್ಭುತವಾದದ್ದು. ಕ್ರಿಕೆಟ್ನಲ್ಲಿ ಧೋನಿಯವರನ್ನು ಇಷ್ಟಪಡದವರನ್ನು ಹುಡುಕುವುದು ಕಷ್ಟ ಎಂದು ಮೋದಿಯವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜೊತೆಗೆ ಧೋನಿ ಸೇನೆಗೆ ಸೇರಿದ ವಿಚಾರದ ಬಗ್ಗೆ ಪತ್ರದಲ್ಲಿ ಬರೆದಿರುವ ಮೋದಿಯವರು, ಧೋನಿಯವರಿಗೆ ಭಾರತೀಯ ಸೇನೆಯ ಮೇಲೆ ಇರುವ ಪ್ರೀತಿ ಅಪಾರವಾದದ್ದು ಎಂದಿದ್ದಾರೆ. ಜೊತೆಗೆ ಧೋನಿಯವರು ಸಣ್ಣ ಪಟ್ಟಣದಲ್ಲಿ ಹುಟ್ಟಿ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ. ಈಗಿನ ಯುವಜನತೆ ಸ್ಪೂರ್ತಿಯಾಗಿದ್ದಾರೆ. ಧೋನಿಯವರ ಸಾಧನೆಯನ್ನು 130 ಕೋಟಿ ಭಾರತೀಯರು ಮೆಚ್ಚಿಕೊಳ್ಳಬೇಕು ಎಂದಿದ್ದಾರೆ.
ಧೋನಿಯವರು ವೃತ್ತಿಪರ ಜೀವನ ಮತ್ತು ವೈಯಕ್ತಿಕ ಜೀವನವನ್ನು ಸರಿಯಾಗಿ ಬ್ಯಾಲೆನ್ಸ್ ಮಾಡಿದ್ದಾರೆ. ಜೊತೆಗೆ 2011ರ ವಿಶ್ವಕಪ್ನಲ್ಲಿ ಅವರು ಕೂಲ್ ಆಗಿ ಆಡಿ ಕಪ್ ಅನ್ನು ಗೆದ್ದುಕೊಟ್ಟಿದ್ದಾರೆ. 2007ರ ಟಿ-20 ವಿಶ್ವಕಪ್ ಅನ್ನು ಗೆದ್ದು ಅವರಲ್ಲಿರುವ ಛಲವನ್ನು ತೋರಿಸಿದ್ದಾರೆ. ಇಂಥಹ ಅದ್ಭುತ ಕ್ರೀಡಾಪಟುವಿನ ನಿವೃತ್ತಿ ನಂತರದ ಜೀವನ ಚೆನ್ನಾಗಿರಲಿ. ಮುಂದೆ ಅವರು ತಮ್ಮ ಕುಟುಂಬದ ಜೊತೆ ಉತ್ತಮವಾದ ಸಮಯವನ್ನು ಕಳೆಯಲಿ ಎಂದು ಮೋದಿಯವರು ಪತ್ರದ ಮೂಲಕ ಶುಭಕೋರಿದ್ದಾರೆ.
An Artist,Soldier and Sportsperson what they crave for is appreciation, that their hard work and sacrifice is getting noticed and appreciated by everyone.thanks PM @narendramodi for your appreciation and good wishes. pic.twitter.com/T0naCT7mO7
— Mahendra Singh Dhoni (@msdhoni) August 20, 2020
