ಭಾರಿ ಮಳೆ : ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ನಾಳೆ (ಜು17) ರಂದು ರಜೆ ಘೋಷಣೆ – vishwanews24
ಭಾರಿ ಮಳೆ : ಉಡುಪಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ನಾಳೆ (ಜು17) ರಂದು ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 16 ರಂದು ಗುರುವಾರ (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಜಿಲ್ಲೆಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ, ಐಟಿಐ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
