ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ಭಾರೀ ಮಳೆಯ ಎಚ್ಚರಿಕೆ : ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ 

ಬೆಂಗಳೂರು: ಇಂದಿನಿಂದ (ಭಾನುವಾರ) ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ, ಒಳನಾಡಿನಲ್ಲಿ ಜೋರು ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ಮುಂದಿನ ಮೂರ್ನಾಲ್ಕು ದಿನವೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಕರಾವಳಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, 3,4 ಮತ್ತು 5ನೇ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ‘

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಗೆ  ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಪೂಂಜ – Vishwanews24

ದಕ್ಷಿಣ ಒಳನಾಡಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ನಾಳೆ (ಸೋಮವಾರ) ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆಗೆ  ಸಿಎಂಗೆ ಮನವಿ ಸಲ್ಲಿಸಿದ ಶಾಸಕ ಪೂಂಜ – Vishwanews24

Leave a Reply