ಭಾರೀ ಮಳೆ: ಶೃಂಗೇರಿ-ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ – Vishwanews24

Featured, ರಾಜ್ಯ ನ್ಯೂಸ್

ಭಾರೀ ಮಳೆ: ಶೃಂಗೇರಿ-ಆಗುಂಬೆ ಸಂಪರ್ಕ ರಸ್ತೆ ಸಂಪೂರ್ಣ ಕಡಿತ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ರಾಜ್ಯ ಹೆದ್ದಾರಿ ರಸ್ತೆ ಕೊಚ್ಚಿ ಹೋದ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಬಳಿ ನಡೆದಿದೆ.

ನೇರಳೆಕೊಡಿಗೆಯಲ್ಲಿ ಸುಮಾರು 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದ್ದು, ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ.

ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

‌ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ: 5 ಜಿಲ್ಲೆಗಳಿಗೆ  ಆರೆಂಜ್ ಅಲರ್ಟ್ ಘೋಷಣೆ – Vishwanews24

ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಭಾರೀ ಮಳೆ. ಮೂಡಿಗೆರೆ ತಾಲೂಕಿನ ದೇವರ ಮನೆಯಲ್ಲಿ ಒಂದೇ ದಿನದಲ್ಲಿ ಬರೋಬ್ಬರಿ 350 ಮಿಲಿ ಮೀಟರ್ ಮಳೆ. ಬೈದುವಳ್ಳಿ ಗ್ರಾಮದಲ್ಲಿ ರಸ್ತೆ ಮೇಲೆ ನುಗ್ಗುತ್ತಿರುವ ನೀರು. ಕಳಸ ತಾಲೂಕಿನ ಬಲಿಗೆ ಬಳಿ ಭೂಕುಸಿತ ರಸ್ತೆಯತ್ತ ಬಂದು ಬೀಳುತ್ತಿರುವ ಬೃಹತ್ ಬಂಡೆಗಳು. ಹೊರನಾಡು-ಬಲಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಭೂಕುಸಿತ ಉಂಟಾಗಿದೆ.

Leave a Reply