ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಮಂದಿ ಸಾವು -Vishwanews24
ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಮೃತರು ಧಾರವಾಡದ ನಿಜಾಮುದ್ದೀನ್ ಸೌದಾಗರ ಎಂಬ ಕುಟುಂಬದವರು ಎಂದು ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಚಾಲಕ ಹಾಗೂ ಒಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾಶೀಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
