ಭೀಕರ ರಸ್ತೆ ಅಪಘಾತ : ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ 5 ಮಂದಿ ಸಾವು – vishwanews24
ಭೀಕರ ರಸ್ತೆ ಅಪಘಾತ : ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಮಂದಿ ಸಾವು
ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಗ್ರಾಜ್ನ ಮಾಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುನೀತಾ (40), ನೀಲಮ್ಮ(62), ಲಕ್ಷ್ಮಿ (57), ಕಲಾವತಿ (60), ಸಂತೋಷ (45) ಮೃತ ದುರ್ದೈವಿಗಳು.
ಉತ್ತರಪ್ರದೇಶದ ಕಾಶಿ ಬಳಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ವರದಿಯಾಗಿದೆ.
ಒಂದೇ ಕುಟುಂಭದ 12 ಮಂದಿ ಎರಡು ದಿನಗಳ ಹಿಂದೆ ಕ್ರೂಸರ್ ವಾಹನದಲ್ಲಿ ಪ್ರಯಾಗರಾಜ್ನ ಮಹಾ ಕುಂಭಮೇಳಕ್ಕೆ ತೆರಳಿದ್ದರು. ಉತ್ತರಪ್ರದೇಶದ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
