ಮಂಗಳವಾರ ಉಡುಪಿಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಇಲ್ಲ: vishwanews24

Featured, ಉಡುಪಿ

ಹಲವು ದಿನಗಳ ಬಳಿಕ ಉಡುಪಿ ಜಿಲ್ಲೆಗೆ ಮಂಗಳವಾರದಂದು ಶುಭ ಸುದ್ದಿ ಲಭ್ಯವಾಗಿದೆ. ಮಂಗಳವಾರದಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲ. ಆ ಮೂಲಕ ಇಂದು ಜಿಲ್ಲೆಯ ಜನತೆ ನಿರಾಳರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಬಹುತೇಕ ಮಹಾರಾಷ್ಟ್ರದಿಂದ ಮರಳಿದವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗುತ್ತಿತ್ತು. ಇದು ಜಿಲ್ಲಾಡಳಿ ಆರೋಗ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿತ್ತು. ಕೇವಲ ಮೂವರು ಮಾತ್ರವೇ ಸೋಂಕಿತರಿದ್ದ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಒಂಬೈನೂರರ ಗಡಿದಾಟಿತ್ತು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 947ಕ್ಕೆ ತಲುಪಿತ್ತು. ಸೋಮವಾರವೂ 45 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಆದರೆ, ಮಂಗಳವಾರದಂದು ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ.

ಈ ನಡುವೆ ಜಿಲ್ಲೆಯಲ್ಲಿ ಮಂಗಳವಾರದಂದು 103 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.