ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು ಹೀಗಿವೆ – Vishwanews24

Featured, ರಾಜ್ಯ ನ್ಯೂಸ್

ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು ಹೀಗಿವೆ – Vishwanews24

ಬೆಂಗಳೂರು, ಅ. 05: ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠಕ್ಕೆ ಅರ್ಚಕರ ನೇಮಕ, ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ, ವೃದ್ಧಾಪ್ಯ ವೇತನ ಹೆಚ್ಚಳ, ಪೊಲೀಸ್ ನೇಮಕಾತಿ ತಿದ್ದುಪಡಿ ಸೇರಿದಂತೆ ಹಲವು ವಿಚಾರಗಳ ಮಂಗಳವಾರ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಮಂಗಳವಾರ ನಡೆದ ಸಂಪುಟ ಸಭೆಯ ತೀರ್ಮಾನಗಳು ಹೀಗಿವೆ:

* ವೃದ್ಧಾಪ್ಯ ವೇತನ‌ 1000 ರೂ ನಿಂದ 1200 ಗೆ ಏರಿಕೆ, ಸಂಧ್ಯಾ ಸುರಕ್ಷೆ ಯೋಜನೆಯಡಿ ಪಿಂಚಣಿ ಹೆಚ್ಚಳ, 36 ಲಕ್ಷ ವೃದ್ಧ ಫಲಾನುಭವಿಗಳಿಗೆ ಅನುಕೂಲ

* ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್‌ಗಳ ಹಂಚಿಕೆಗೆ 24.85 ಕೋಟಿ ರೂ. ಬಿಡುಗಡೆ

* ಹಿಪ್ಪರಗಿ ತಿರುವು ಬ್ಯಾರೇಜ್ ತಡೆಗೋಡೆ ನಿರ್ಮಾಣಕ್ಕೆ 28 ಕೋಟಿ ರೂ. ಬಿಡುಗಡೆಗೆ ಸಂಪುಟದ ಒಪ್ಪಿಗೆ

* ಮಂಡ್ಯ ಮೈಶುಗರ್ ಖಾಸಗೀಕರಣ ವಿಚಾರದ ಬಗ್ಗೆ ಚರ್ಚೆ. ಸಚಿವ ಸಂಪುಟ ಉಪಸಮಿತಿ ರಚನೆ, ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಗೋವಿಂದ ಕಾರಜೋಳ, ಕೆಸಿ ನಾರಾಯಣ ಗೌಡ, ಆರ್. ಅಶೋಕ್ ಇರುವ ಸಮಿತಿ ರಚನೆ. ಖಾಸಗೀಕರಣ ಮಾಡಬೇಕಾ? ಬೇಡವಾ? ಎಂಬ ವರದಿ ಕೊಡಲಿರುವ ಸಮಿತಿ

* ಪೊಲೀಸ್ ನೇಮಕಾತಿ ತಿದ್ದುಪಡಿ ನಿಯಮಗಳಿಗೆ ಅನುಮೋದನೆ, ಅದರಿಂದ ಕಾನ್ಸ್ಟೆಬಲ್ ಹುದ್ದೆಯಿಂದ ಸಬ್‌ ಇನ್ಸ್‌ಪೆಕ್ಟರ್ ಹುದ್ದೆವರೆಗೆ ಬಡ್ತಿ ಪ್ರಕ್ರಿಯೆ ಇನ್ನಷ್ಟು ಸುಲಭ

* ಪೊಲೀಸ್ ಆಧುನೀಕರಣ ಯೋಜನೆಯಡಿ ಬೆಂಗಳೂರಿಗೆ ಅತ್ಯಾಧುನಿಕ ಡಿಜಿಟಲ್ ಸಂಪರ್ಕ ವ್ಯವಸ್ಥೆ, 14.65 ಕೋಟಿ ವೆಚ್ಚ

* ಸಮುದ್ರದಿಂದ ಉಪ್ಪು ನೀರು ನದಿಗಳಿಗೆ ಬರದಂತೆ ತಡೆಯುವ ಖಾರ್‌ಲ್ಯಾಂಡ್ ಯೋಜನೆಗೆ ಸಂಪುಟದ ತಾತ್ವಿಕ ಒಪ್ಪಿಗೆ

* 1500 ಕೋಟಿ ವೆಚ್ಚದ ಖಾರ್‌ಲ್ಯಾಂಡ್ ಯೋಜನೆ, ಸದ್ಯ 300 ಕೋಟಿ ರೂ. ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ

* ಖಾನಾಪುರ ತಾಳಗುಪ್ಪ ಹೆದ್ದಾರಿಯಲ್ಲಿ ದ್ವಿಪಥಕ್ಕೆ 15 ಕೋಟಿ ರೂ. ಬಿಡುಗಡೆಗೆ ಸಂಪುಟ ಒಪ್ಪಿಗೆ

* ಕಾರ್ಕಳ ತಾಲ್ಲೂಕಿನಲ್ಲಿ ಹೊಸದಾಗಿ ಹೆಬ್ರಿ ಹೋಬಳಿ ರಚನೆಗೆ ಸಂಪುಟದ ಒಪ್ಪಿಗೆ

* ದತ್ತ ಪೀಠಕ್ಕೆ ಅರ್ಚಕರ ನೇಮಕ ವಿಚಾರ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ. ಕಾನೂನು ಸಚಿವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ.

* ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ ಇನ್ನೂ ಕಾಯ್ದೆ ಆಗಿಲ್ಲ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇನ್ನೂ ಸಹಿ ಹಾಕಿಲ್ಲ. ಸಭಾಪತಿಯವರ ಸಹಿ ಬಳಿಕ ರಾಜ್ಯಪಾಲರಿಗೆ ಮಸೂದೆ ಕಳಿಸಲು ತೀರ್ಮಾನ. ರಾಜ್ಯಪಾಲರ ಒಪ್ಪಿಗೆ ಬಳಿಕ ಮಸೂದೆ ಕಾಯ್ದೆಯಾಗಿ ಬದಲಾವಣೆ. ನಂತರ ಸುಪ್ರೀಂ ಕೋರ್ಟ್ ಗಮನಕ್ಕೆ ತರಲು ಸಂಪುಟದಲ್ಲಿ ತೀರ್ಮಾನ

* ಉಪಚುನಾವಣೆ ಬಗ್ಗೆ ಸಂಪುಟದಲ್ಲಿ ಚರ್ಚೆ ಆಗಿಲ್ಲ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚರ್ಚೆ ಮಾಡಿಲ್ಲ. ನೀತಿ ಸಂಹಿತೆ ಕುರಿತು ಸಭೆಯ ಗಮನಕ್ಕೆ ತರಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.