ಮಂಗಳೂರಿನಲ್ಲಿ ನಡೆದಿರುವ ಗಲಭೆಯಲ್ಲಿ ಕಾಂಗ್ರೆಸ್ ಕೈವಾಡವಿಲ್ಲ : ಯು.ಟಿ ಖಾದರ್ -Vishwanews24
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹೆಸರಿಗೆ ಕಳಂಕ ತರಲು ಮಂಗಳೂರಿನಲ್ಲಿ ಗಲಭೆ ಮಾಡಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಚಿವ ಖಾದರ್, ಪೌರತ್ವ ತಿದ್ದುಪಡಿ ಕಾಯ್ದೆಯ ಎಲ್ಲಾ ಸಮಸ್ಯೆಗಳಿಗೆ ಬಿಜೆಪಿಯವರೇ ಪರಿಹಾರ ಕಂಡುಕೊಳ್ಳಲಿ. ಅದಲ್ಲದೆ ಸುಮ್ಮನೆ ಕಾಂಗ್ರೆಸ್ ಮೇಲೆ ಆರೋಪ ಮಾಡಬೇಡಿ. ಮಂಗಳೂರಿನಲ್ಲಿ ನಡೆದಿರುವ ಗಲಭೆಯಲ್ಲಿ ಕಾಂಗ್ರೆಸ್ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದರು.


ಮಂಗಳೂರು ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ ಗಲಾಟೆಯಾಗಿದೆ. ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಗೆ ಬಿಜೆಪಿಯೇ ನೇರ ಹೊಣೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬಿಜೆಪಿ ತನ್ನ ವೋಟ್ ಬ್ಯಾಂಕ್’ಗಾಗಿ ಉಪಯೋಗಿಸುತ್ತಿದೆ ಎಂದು ಆರೋಪಿಸಿದರು.
