ಮಂಗಳೂರಿನಲ್ಲಿ ಬೈಕ್ ಅಪಘಾತ ಮಾಣಿಲದ ಯುವಕ ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಬೈಕ್ ಅಪಘಾತ ಮಾಣಿಲದ ಯುವಕ ಮೃತ್ಯು

ವಿಟ್ಲ : ಮಂಗಳೂರಿನಲ್ಲಿ ನಡೆದ ಬೈಕ್ ಅಪಘಾತವೊಂದರಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಮಾಣಿಲ ಗ್ರಾಮದ ಪಕಳಕುಂಜ ಬಾಳೆಕಾನ ನಿವಾಸಿ ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ ಮಣಿಯಾನಿ (24) ಮೃತ ದುರ್ದೈವಿ.

ಕಾರ್ತಿಕ್ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ ಎನ್ನಲಾಗಿದೆ.

ಮೃತರು ತಾಯಿ ಸುಧಾಮಣಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ‌.

ಶಿಷ್ಯನ ಭ್ರಷ್ಟಾಚಾರವನ್ನು ಹೊರಗೆಡವಲು ಗುರು ಪ್ರಮೋದ್ ಮುತಾಲಿಕ್ ಕಾರ್ಕಳಕ್ಕೆ ಆಗಮಿಸಿದ್ದಾರೆ : ಮಂಜುನಾಥ ಪೂಜಾರಿ – Vishwanews24

Leave a Reply