ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ – ಭದ್ರತೆ ಹೆಚ್ಚಳ

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ.

ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಮಂಗಳೂರು: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್‌ ಪ್ರತಿಭಟನೆ  – viswhanews24

 

ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ. ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.

ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ವಿಜಯೇಂದ್ರಗೆ ನೋಟಿಸ್‌ ನೀಡಿ: ರಮೇಶ್ ಜಾರಕಿಹೊಳಿ – vishwanews24

ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Leave a Reply