ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ದುರಂತ ; 236 ಪ್ರಯಾಣಿಕರು ಅಪಾಯದಿಂದ ಪಾರು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ..

ಟೇಕ್ ಆಫ್ ವೇಳೆ ಇಂಜಿನ್‌ನಲ್ಲಿ ದೋಷ ..

236 ಪ್ರಯಾಣಿಕರು ಅಪಾಯದಿಂದ ಪಾರು ..

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೈಲಟ್​ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ವಿಮಾನದಲ್ಲಿದ್ದ 236 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ವಿಮಾನವು ಟೇಕ್ ಆಫ್ ಆಗುವ ವೇಳೆ ಇಂಜಿನ್​ನಲ್ಲಿ ದೋಷ ಕಂಡು ಬಂದಿತ್ತು ಎನ್ನಲಾಗಿದೆ. ತಕ್ಷಣ ಎಚ್ಚೆತ್ತ ವಿಮಾನದ ಪೈಲಟ್​ ಸಮಯ ಪ್ರಜ್ಞೆ ಮೆರೆದ ಪರಿಣಾಮ ಟೇಕ್ ಆಫ್ ಆಗುವ ಕೊನೆ ಕ್ಷಣದಲ್ಲಿ ಬ್ರೇಕ್ ಹಾಕಿದ್ದು, ಭಾರೀ ಅನಾಹುತ ತಪ್ಪಿದೆ.

ಸೋಮವಾರ ಸಂಜೆ ಮಂಗಳೂರಿನಿಂದ ಇಂಡಿಗೋ ವಿಮಾನವು ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿತ್ತು. ವಿಮಾನದಲ್ಲಿ 229 ಪ್ರಯಾಣಿಕರು ಮತ್ತು 7 ಮಂದಿ ವಿಮಾನದ ಸಿಬ್ಬಂದಿಗಳಿದ್ದರು. ರನ್ ವೇಯಲ್ಲಿ ಟೇಕ್ ಆಫ್ ಆಗುವ ವೇಳೆ ವಿಮಾನದ ಇಂಜಿನ್​ನಲ್ಲಿ ತಾಂತ್ರಿಕ ದೋಷವಿರುವುದು ಪೈಲಟ್​‌ನ ಗಮನಕ್ಕೆ ಬಂತು ಎನ್ನಲಾಗಿದೆ.

ತಕ್ಷಣ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದುಬಂದಿದೆ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ್ದಾರೆ. ಬಳಿಕ ಪ್ರಯಾಣಿಕರಿಗೆ ಬೆಂಗಳೂರಿಗೆ ತೆರಳಲು ಇಂಡಿಗೋ ಸಿಬ್ಬಂದಿ ಬೇರೆ ವಿಮಾನದ ವ್ಯವಸ್ಥೆ ಕಲ್ಪಿಸಿದೆ ಎನ್ನಲಾಗಿದೆ.

Leave a Reply