ಮಂಗಳೂರು: ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಎಲ್ಲರಿಗೂ ತಪಾಸಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಎಲ್ಲರಿಗೂ ತಪಾಸಣೆ – Vishwanews24

ಮಂಗಳೂರು: ಕೊರೊನಾ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ತಡೆಯುವ ಉದ್ದೇಶದಿಂದ ಮಂಗಳೂರು ಮನಪಾ ವ್ಯಾಪ್ತಿಯಲ್ಲಿರುವ ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡರೆ ಅಂತಹ ಅಪಾರ್ಟ್​ಮೆಂಟ್​ನಲ್ಲಿರುವ ಎಲ್ಲರನ್ನೂ ಕೊರೊನಾ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂಬ ಹೊಸ ನಿಯಮ ಜಾರಿಯಾಗಿದೆ.

ಪ್ರಸ್ತುತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 17ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಸಂಪರ್ಕಿತರ ತಪಾಸಣೆ ಮಾಡಲಾಗುತ್ತದೆ. ಆದ್ದರಿಂದ ಇನ್ನು ಮುಂದೆ ಅಪಾರ್ಟ್​ಮೆಂಟ್​ಗಳಲ್ಲಿ ಕೊರೊನಾ ಪ್ರಕರಣ ಕಂಡು ಬಂದಲ್ಲಿ ಆ ವಸತಿ ಸಮುಚ್ಚಯದ ಎಲ್ಲರನ್ನೂ ಪ್ರಾಥಮಿಕ ಸಂಪರ್ಕಕಿತರೆಂದು ಪರಿಗಣಿಸಿ ಕೋವಿಡ್​​ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ.