ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಬಸ್ ಚಾಲಕ ಅರೆಸ್ಟ್ – Vishwanews24
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ; ಬಸ್ ಚಾಲಕ ಅರೆಸ್ಟ್ – Vishwanews24
ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ಚಾಲಕನನ್ನು ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ದಯಾನಂದ (32) ಎಂದು ಗುರುತಿಸಲಾಗಿದೆ.
ಕಾವೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಕೃತ್ಯ ಎಸಗಿರುವ ಆರೋಪದ ಮೇಲೆ ಬಂಧಿಸಲಾಗಿದೆ.
ದಯಾನಂದ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಬಾಲಕಿಯನ್ನು ತನ್ನೊಂದಿಗೆ ಬರುವಂತೆ ಆಮಿಷ ಒಡ್ಡಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಬಂದು ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಇನ್ನು ಈ ಬಗ್ಗೆ ಬಾಲಕಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ :
