ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರ ಬಂಧನ – vishwanews24
ಮಂಗಳೂರು: ಆಂಧ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮೂಲಕ ಕೇರಳಕ್ಕೆ ಸಾಗಿಸುತ್ತಿದ್ದ 119 ಕೆಜಿ ಗಾಂಜಾವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.
ಅಜಯ್ ಕೃಷ್ಣನ್ ಯು., ಜೀವನ್ ಸಿಂಗ್, ಮೊಯ್ದಿನ್ ಶಬ್ಬೀರ್ ಮತ್ತು ಮಹೇಶ್ ದ್ವಾರಕನಾಥ್ ಪಾಂಡೆ ಬಂಧಿತ ಆರೋಪಿಗಳು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.
ಮಂಗಳೂರು ಮೂಲಕ ಕೇರಳಕ್ಕೆ ಅಪಾರ ಪ್ರಮಾಣದ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಸುಳಿವು ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಕಾರು ಮತ್ತು ಮಿನಿ ಟ್ರಕ್ ಅನ್ನು ತಡೆದು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
