ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು – visshwanews24
ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು
ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಗ್ಗೆ ಸಂಭವಿಸಿದೆ.
ಕಾರ್ಕಳದ ರಂಜಿತಾ (28) ಮೃತಪಟ್ಟವರು. ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಕ್ಲಿಷ್ಟ ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ.
ಕಾರ್ಕಳ : ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ – vishwanews24
ಕೂಡಲೇ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಮೃತಪಟ್ಡಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.
