ಮಂಗಳೂರು: ಏ.22ರಿಂದ ಮೇ.18ರ ವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ – Vishwnaews24

Featured, ದಕ್ಷಿಣ ಕನ್ನಡ

ಮಂಗಳೂರು: ಏ.22ರಿಂದ ಮೇ.18ರ ವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮಂಗಳೂರು: ಇದೇ ಏ.22ರಿಂದ ಮೇ.18ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹಾಗೂ ಅನುಮಾಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿರುವ ಸಂಬಂಧಿತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಕಲಂ 144ರ ಸಿಆರ್‍ಪಿಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ನಗರ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತು ಪಡಿಸಿ ಸಾರ್ವಜನಿಕರು 5 ಅಥವಾ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರ ಬರೆದು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ, ಪರೀಕ್ಷೆ ಪ್ರಾರಂಭವಾಗುವ ಅರ್ಧಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ನಿಷೇಧಿಸಲಾಗಿದೆ, ಮೊಬೈಲ್, ದೂರವಾಣಿ, ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಭಾರತಕ್ಕೆ ಆಗಮಿಸಿದ ಬ್ರಿಟನ್ ಪ್ರಧಾನಿ ಜಾನ್ಸನ್‌ ; ಗುಜರಾತ್‌ನ ಸಬರಮತಿ ಆಶ್ರಮಕ್ಕೆ ಭೇಟಿ – Vishwanews24

Leave a Reply