ಮಂಗಳೂರು : ಓವರ್ ಟೇಕ್ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ – Vishwanews24
ಮಂಗಳೂರು : ಓವರ್ ಟೇಕ್ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ
ಮಂಗಳೂರು: ವೆಲೆನ್ಸಿಯಾದಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಬಸ್ ಢಿಕ್ಕಿ ಹೊಡೆದಿರುವ ಘಟನೆ ಶುಕ್ರವಾರ ನಡೆದಿದೆ.
ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದ್ದು, ಮೊಟ್ಟೆಗಳೆಲ್ಲ ಒಡೆದು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ.
ಇನ್ನು ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೊಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದ್ದು, ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ.. ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ ದಾನ – Vishwanews24
ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಳಿಸರು ಆಗಮಿಸಿ, ಬಸ್ ಅನ್ನು ವಶಪಡಿಸಿಕೊಂಡಿದ್ದಾರೆ.
