ಮಂಗಳೂರು : ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ – Vishwanews24

Featured, ದಕ್ಷಿಣ ಕನ್ನಡ

ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಒಂದು ವಾರ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ನಗರದಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಒಂದು ಡಿಗ್ರಿ ಹೆಚ್ಚಿತ್ತು.

Leave a Reply