ಮಂಗಳೂರು: ನಾರಾಯಣ ಗುರು ಟ್ಯಾಬ್ಲೋ ವಿವಾದ : ಕಾಂಗ್ರೆಸ್ ಕಚೇರಿಯಲ್ಲಿ ರಮಾನಾಥ ರೈ ಹಾಗು ಯುವ ಕಾರ್ಯಕರ್ತರ ವಾಗ್ವಾದ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ – Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ತನಕ ಮುಂದುವರಿಯಿತು.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು.

ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ಕೇರಳ ರಾಜ್ಯದಲ್ಲಿ ಸನ್ಮಾನ:vishwanews24

ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಕಚೇರಿ ಸಭಾಂಗಣದ ಬಾಗಿಲನ್ನು ಕಾರ್ಯಕರ್ತರು ಬಂದ್ ಮಾಡಿದ್ದು, ಯೂತ್ ಕಾಂಗ್ರೆಸ್ ಸದಸ್ಯರನ್ನ ನಾಯಕರು ಹೊರಹಾಕಿದ ಘಟನೆ ನಡೆದಿದೆ.

ವಾಗ್ವಾದ ನಡೆಸಿದವರನ್ನು ಸಭಾಂಗಣದಿಂದ ಹೊರ ಹೋಗುವಂತೆ ಹಿರಿಯ ನಾಯಕರು ಸೂಚಿಸಿದರು. ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಸಮಾಧಾನ ಪಡಿಸಿದ ಬಳಿಕ ಪ್ರಕರಣ ಸುಖಾಂತ್ಯವಾಯಿತು.

ಪಂಜಾಬ್ : ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ – Vishwanews24

Leave a Reply