ಮಂಗಳೂರು: ಗಾಂಜಾ ಮಾರಾಟ ಪ್ರಕರಣ – ವೈದ್ಯಕೀಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ – Vishwanews24
ಮಂಗಳೂರು: ಗಾಂಜಾ ಮಾರಾಟ ಪ್ರಕರಣ – ವೈದ್ಯಕೀಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ
ಮಂಗಳೂರು: ನಗರದ ಎರಡು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಪೆಥೊಲೊಜಿ ಎಮ್ ಡಿ ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, ಡಿ ಫಾರ್ಮಾ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23 ಎಂದು ಗುರುತಿಸಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ : ಡಿಕೆಶಿ – Vishwanews24
ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು 10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಓರ್ವ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದಾನೆ. ಈ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಸರಗೋಡು :ಆಫ್ರಿಕನ್ ಹಂದಿ ಜ್ವರ ಪತ್ತೆ ಹಿನ್ನೆಲೆ : ಮೂರು ತಿಂಗಳು ಹಂದಿ ಮಾಂಸ ನಿಷೇಧ – Vishwanews24
