ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕರ್ತವ್ಯನಿರತ ಮಹಿಳಾ ಪಿಎಸ್ಐ – Vishwanews24
ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪಿಎಸ್ಐ
ಮಂಗಳೂರು: ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಮಹಿಳಾ ಪಿಎಸ್ಐ ನವಮಂಗಳೂರು ಬಂದರು ಪ್ರಾಧಿಕಾರದ ಮುಖ್ಯ ಗೇಟ್ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅ. ೧೧ ರ ಸಂಜೆ ವೇಳೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಭದ್ರತಾ ಸಿಬ್ಬಂದಿಯನ್ನು ಎಂಆರ್ ಪಿಎಲ್ ನಲ್ಲಿ ಸಹಾಯಕ ಕಮಾಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಓಂಬೀರ್ ಸಿಂಗ್ ಪರ್ಮಾರ್ ಪತ್ನಿ ಜ್ಯೋತಿ ಬಾಯಿ (33) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ ನಿಧನ – Vishwanews24
ಕೌಟುಂಬಿಕ ಕಲಹದಿಂದ ಮನನೊಂದು ನಿನ್ನೆ ಸಂಜೆ 6 ಗಂಟೆಯ ವೇಳೆಗೆ ತನ್ನ ತಾಯಿಗೆ ಸೂಸೈಡ್ ನೋಟ್ ಬರೆದು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸದ್ಯ ಜ್ಯೋತಿ ಬಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಂಪತಿಗಳು ಇಬ್ಬರೂ ಭರತ್ಪುರ ಜಿಲ್ಲೆ ರಾಜಸ್ಥಾನಕ್ಕೆ ಸೇರಿದವರಾಗಿದ್ದಾರೆ. ಜ್ಯೋತಿ ಭಾಯಿ 2010ನೇ ಬ್ಯಾಚ್ ನವರಾಗಿದ್ದಾರೆ.

