ಮಂಗಳೂರು ಗೋಡೆ ಬರಹ ಪ್ರಕರಣ : ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘ ನಿರ್ಣಯ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಗೋಡೆ ಬರಹ ಪ್ರಕರಣ : ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘ ನಿರ್ಣಯ -Vishwanews24

ಮಂಗಳೂರು,  : ಇತ್ತೀಚೆಗೆ ಬಿಜೈನ ಅಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಹಾಗೂ ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಪ್ರಚೋದನಕಾರಿ ಬರಹಗಳನ್ನು ಬರೆದ ಆರೋಪಿಗಳ ಪರವಾಗಿ ವಕಾಲತ್ತು ವಹಿಸಬಾರದು ಎಂದು ವಕೀಲರ ಸಂಘ ನಿರ್ಣಯಿಸಿದ್ದು ಈ ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘದ ಸದಸ್ಯರಿಗೆ ಸಂಘವು ತಿಳಿಸಿದೆ.

ಡಿಸೆಂಬರ್ 7 ರಂದು ವಕೀಲರ ಸಂಘದ ಅಧ್ಯಕ್ಷ ಎಂ.ನರಸಿಂಹ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು ಮಂಗಳೂರು ವಕೀಲರ ಸಂಘದ ಸದಸ್ಯರು ದೇಶದ್ರೋಹ, ಭಯೋತ್ಪಾದನೆಯಲ್ಲಿ ಭಾಗಿಯಾಗಿರುವ ಅಥವಾ ಬೆಂಬಲ ನೀಡಿದವರ ಪ್ರಕರಣಗಳಿಗೆ ಕಾನೂನು ನೆರವು, ಸಹಕಾರ ನೀಡುವುದಿಲ್ಲ ಎಂದು ನಿರ್ಧರಿಸಿದರು.

ಹಾಗೆಯೇ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ಪರ ವಾದಿಸದಂತೆ ಸಂಘದ ಮುಖ್ಯ ಕಾರ್ಯದರ್ಶಿ ಸಂಘದ ಸದಸ್ಯರಿಗೆ ಮನವಿ ಮಾಡಿದರು.