ಮಂಗಳೂರು ಗೋಲಿಬಾರ್ ಪ್ರಕರಣ : ಮೃತರ ಕುಟುಂಬಕ್ಕೆ ಕೆಪಿಸಿಸಿಯಿಂದ ಪರಿಹಾರ ವಿತರಣೆ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ನಗರದಲ್ಲಿ ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ನೌಶೀರ್ ಹಾಗೂ ಜಲೀಲ್ ಕುಟುಂಬಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇರಿ 7.5 ಲಕ್ಷ ಪರಿಹಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿತರಿಸಿದರು.

ಮಂಗಳೂರಿನಲ್ಲಿ ಕಳೆದ ಬುಧುವಾರದಂದು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇಂತಹ ಪ್ರತಿಭಟನೆಯ ವೇಳೆ ಪೊಲೀಸರು ನಡಿಸಿದ ಗೋಲಿಬಾರ್ ಗೆ ನಗರದ ಜಲೀಲ್ ಹಾಗೂ ನೌಶೀರ್ ಎಂಬುವರು ಬಲಿಯಾಗಿದ್ದರು. ಮೃತರ ಮನೆಗಳಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಈ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಮಾಯಕರನ್ನು ಆಡಳಿತ ಪಕ್ಷ ಗೋಲಿಬಾರ್ ನಲ್ಲಿ ಬಲಿ ಪಡೆದಿದೆ. ಈ ಕುರಿತಂತೆ ಸಮಗ್ರ ತನಿಖೆಯಾಗಬೇಕು. ಸಿಐಡಿ ತನಿಖೆಗೆ ವಹಿಸಿರುವುದನ್ನು ನಾನು ಒಪ್ಪುವುದಿಲ್ಲ. ಸಿಐಟಿ ತನಿಖಾ ಸಂಸ್ಥೆ ಸರ್ಕಾರದ ಕೈಗೊಂಬೆಯಾಗಿದೆ. ಇದರ ಜೊತೆಗೆ ನ್ಯಾಯಾಂಗ ತನಿಖೆ ಕೂಡ ನಡೆಸಬೇಕು. ಈ ಮೂಲಕ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂಬುದಾಗಿ ಅಗ್ರಹಿಸಿದರು.