ಮಂಗಳೂರು : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ – Vishwanews24
ಮಂಗಳೂರು : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬಂಟ್ವಾಳ: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ 6.20 ಕ್ಕೆ ನಡೆದಿದೆ.
ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡವರಾಗಿರಬೇಕು ಎಂದು ಆಕೆಯ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯನ್ನು ರೈಲ್ವೆ ಪೋಲೀಸರು ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ನೀಡಿದ್ದಾರೆ.
ಮಹಿಳೆಯ ಆಧಾರ್ ಕಾರ್ಡ್ ನಲ್ಲಿ c/o ಎಮ್.ಗೋವಿಂದರಾಜು ಪಡಸಾಲೆಹಟ್ಟಿ,ಮಿಡಿಗೇಶಿ,ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ ಬೃಹತ್ ಸಮಾವೇಶ – Vishwanews24
ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹಿಳೆ ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಮಹಿಳೆಯೂ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಮತ್ತು ಅವರ ನಿಖರ ವಿಳಾಸ ವಿವರ ಸರಿಯಾಗಿ ಇನ್ನಷ್ಟೇ ತಿಳಿಯಬೇಕಿದೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞರಾದ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆ.17ರಂದು ರೈತರಿಂದ ʻಬೆಂಗಳೂರು ಚಲೋʼ ಬೃಹತ್ ಸಮಾವೇಶ – Vishwanews24
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಎಸ್.ಐ.ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
