ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ – vishwanews24
ಮಂಗಳೂರು : ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿ
ಮಂಗಳೂರು: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ.
ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು. ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
